ಪುತ್ತೂರು: ಧಾರ್ಮಿಕ ಮುಖಂಡರ ನಿಯೋಗದಿಂದ ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ರೈ ಭೇಟಿ-ಮಾತುಕತೆ
ಕಾಂಗ್ರೆಸ್ ಮುಖಂಡ ಕೋಡಿಂಬಾಡಿ ಅಶೋಕ್ ಕುಮಾರ್ ರೈ ಅವರನ್ನು ಧಾರ್ಮಿಕ ಮುಖಂಡರ ನಿಯೋಗ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಮುಖಂಡರು ಅಶೋಕ್ ರೈ ಅವರಲ್ಲಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದು ಅದಕ್ಕೆ ಅಶೋಕ್ ರೈ ಅವರು ಸಾಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಅಶೋಕ್ ಕುಮಾರ್ ರೈ ಅವರನ್ನು ಮುಂದಿನ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದೇ ಬಿಂಬಿಸಲಾಗುತ್ತಿದೆ. ಇದರ ಮಧ್ಯೆ ಧಾರ್ಮಿಕ ಮುಖಂಡರು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೂ ಕಾರಣವಾಗಿದೆ.
ಪ್ರಮುಖರಾದ ಎಸ್.ಬಿ ದಾರಿಮಿ ಉಪ್ಪಿನಂಗಡಿ, ಹುಸೈನ್ ದಾರಿಮಿ ರೆಂಜಲಾಡಿ, ಉದ್ಯಮಿ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಸಹಿತ ಹಲವರು ಉಪಸ್ಥಿತರಿದ್ದರು.