ಲಂಚ ಪ್ರಕರಣ: ಇನ್ನೂ ಪತ್ತೆಯಾಗದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಕಚ್ಚಾವಸ್ತು ಖರೀದಿ ಟೆಂಡರ್ ಪ್ರಕ್ರಿಯೆಯಲ್ಲಿನ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪೊಲೀಸರ ಎದುರು ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಲೋಕಾಯುಕ್ತ ಪೋಲೀಸರ ನಿದ್ದೆಗೆಡಿಸಿದ್ದಾರೆ.

ಲಂಚ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾ
ಯುಕ್ತ ಪೊಲೀಸರು ಬಂಧಿಸಿದ್ದರು. ಆದರೆ ತಲೆಮರೆಸಿಕೊಂಡಿರುವ ಶಾಸಕ ವಿರೂಪಾಕ್ಷಪ್ಪ ಲೋಕಾಯುಕ್ತ ಪೊಲೀಸರ ಎದುರು ವಿಚಾರಣೆಗೆ ಹಾಜರಾಗದೇ ತಲೆ ಮೆರೆಸಿಕೊಂಡಿದ್ದಾರೆ.
ಅವರ ಪತ್ತೆಗಾಗಿ ಪ್ರಯತ್ನ ನಡೆಸುತ್ತಿರುವ ತನಿಖಾ ತಂಡಕ್ಕೆ ಇದುವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ವಿರೂಪಾಕ್ಷಪ್ಪ ಅವರ ಪತ್ತೆಗೆ ಪ್ರಯತ್ನ ಮುಂದುವರಿದಿದೆ
.