ವಿಧಾನಸಭಾ ಚುನಾವಣೆಗೆ ಗಂಗಾವತಿ ಕ್ಷೇತ್ರದಿಂದಲೇ ಸ್ಪರ್ಧೆ-ಜನಾರ್ದನ ರೆಡ್ಡಿ
ಮುಂಬರುವ ವಿಧಾನಸಭಾ ಚುನಾವಣೆಗೆ ಗಂಗಾವತಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಾಗುವುದು. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದರು.

ಕನಕಗಿರಿಯಲ್ಲಿ ಮಾ.8ರಂದು ಕನಕಾಚಲಪತಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪತ್ರಕರ್ತರ ಜತೆ ಮಾತನಾಡಿದ ಅವರು 224 ಕ್ಷೇತ್ರಗಳ ಪೈಕಿ ಸದ್ಯಕ್ಕೆ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಗೆಲ್ಲುವ 31 ಕಡೆಗಳಲ್ಲಿ ಸ್ಪರ್ಧಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಹೇಳಿದರು.