ಪುತ್ತೂರು ಕ್ಷೇತ್ರದಲ್ಲಿ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡಲು ಮಹಿಳಾ ಕಾಂಗ್ರೆಸ್ ಆಗ್ರಹ
ಪುತ್ತೂರು: ಪುತ್ತೂರು ವಿಧಾನ ಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಅವಕಾಶ ನೀಡುವಂತೆ ಪುತ್ತೂರು ಮಹಿಳಾ ಕಾಂಗ್ರೆಸ್ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ.
ಶಕುಂತಳಾ ಶೆಟ್ಟಿ ಅನುಭವಿ ರಾಜಕಾರಣಿಯಾಗಿದ್ದು ಎರಡು ಬಾರಿ ಶಾಸಕರಾಗಿದ್ದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಹೆಚ್ಚು ಅರಿವಿದೆ. ಸಾವಿರಾರು ಕೋಟಿ ಅನುದಾನ ಪುತ್ತೂರು ಕ್ಷೇತ್ರಕ್ರ್ ತಂದವರು. ಕ್ಷೇತ್ರದಲ್ಲಿ ಮೆಡಿಕಲ್ ಕಾಲೇಜು ಸಹಿತ ಹಲವಾರು ಕನಸು ಈಡೇರಿಸಲು ಅವರಿಗೆ ಅವಕಾಶ ನೀಡಬೇಕು. ಬೇರೆ ಮಹಿಳೆಯರಿಗೆ ಅವಕಾಶ ನೀಡಬಾರದು ಎಂಬುವುದು ನಮ್ಮ ಉದ್ದೇಶವಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ ಹೇಳಿದರು.
ಶಕುಂತಳಾ ಶೆಟ್ಟಿ ಶಾಸಕರಾಗಿ ಆಯ್ಕೆಯಾದರೆ ಪುತ್ತೂರಿಗೆ ಬಹಳಷ್ಟು ಪ್ರಯೋಜನ ಇದೆ. ಮುಂದಿನ ಬಾರಿ ಶಕುಂತಳಾ ಶೆಟ್ಟಿಯವರಿಗೆ ಅವಕಾಶ ಕಡಿಮೆ. ಹಾಗಾಗಿ ಈ ಬಾರಿ ಅವರಿಗೆ ಅವಕಾಶ ನೀಡಬೇಕು. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ. ಎಂದರು
ಕೆಪಿಸಿಸಿ ಕಾರ್ಯದರ್ಶಿ ಸಾಹಿರ ಜುಬೇರ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಬ್ಲಾಕ್ ಕೋಶಾಧಿಕಾರಿ ಮಹಿಳಾ ಕಾಂಗ್ರೆಸ್ ಸದಸ್ಯೆ ವಿಲ್ಮಾ ಗೊನ್ಸಾಲಿಸ್, ಕೋಶಾಧ್ಯಕ್ಷೆ ಶುಭಮಾಲಿನಿ ಮಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.