ಅಮ್ಚಿನಡ್ಕ: ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪ್ರ.ಕಾರ್ಯದರ್ಶಿ ರಶೀದ್ ಅಮ್ಚಿನಡ್ಕ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮನೆ-ಮನೆ ಭೇಟಿ-ಗ್ಯಾರಂಟಿ ಕಾರ್ಡ್ ವಿತರಣೆ
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪ್ರ.ಕಾರ್ಯದರ್ಶಿ ರಶೀದ್ ಅಮ್ಚಿನಡ್ಕ ನೇತೃತ್ವದಲ್ಲಿ ಅಮ್ಚಿನಡ್ಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮಾ.20ರಂದು ನಡೆಯಿತು.

ಮನೆ-ಮನೆಗೆ ತೆರಳಿದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡನ್ನು ವಿತರಣೆ ಮಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ವಿನಂತಿಸಿದರು.

ಎನ್‌ಎಸ್‌ಯುಐ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರ.ಕಾರ್ಯದರ್ಶಿ ಎಡ್ವರ್ಡ್ ಡಿಸೋಜಾ, ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಮೌಲವಿ, ಕಾಂಗ್ರೆಸ್ ಕಾರ್ಯಕರ್ತರಾದ ತ್ವಯ್ಯಿಬ್ ಅಮ್ಚಿನಡ್ಕ, ಆಶಿಕ್ ಮುಖಾರಿಮೂಲೆ ಉಪಸ್ಥಿತರಿದ್ದರು
