ರಾಜಕೀಯರಾಷ್ಟ್ರೀಯ

ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ ಸೂರತ್ ನ್ಯಾಯಾಲಯ

ಪ್ರಧಾನಿ ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ಗುಜರಾತ್ನ ಸೂರತ್ ನ್ಯಾಯಾಲಯ ಹೇಳಿದ್ದು ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ.



2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದ ರ‍್ಯಾಲಿಯಲ್ಲಿ ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ರಾಹುಲ್‌ ವ್ಯಂಗ್ಯವಾಡಿದ್ದರು. ಈ ಸಂಬಂಧ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

Leave a Reply

Your email address will not be published. Required fields are marked *

error: Content is protected !!