ಸುಳ್ಯ: ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ದಾರುಣ ಸಾವನ್ನಪ್ಪಿದ ಪ್ರಕರಣ: ಸ್ಥಳಕ್ಕೆ ಸಚಿವ ಅಂಗಾರ ಭೇಟಿ
ಸುಳ್ಯ ಗುರುಂಪು ಬಳಿ ಬರೆ ಜರಿದು ಬಿದ್ದು ಗದಗ ಮೂಲದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ. ಗದಗ ಮೂಲದ ಸೋಮಶೇಖರ್, ಶಾಂತಕ್ಕ ಹಾಗೂ ಇನ್ನೋರ್ವವರು ಮೃತಪಟ್ಟವರು. ಮನೆಯ ಹಿಂಭಾಗದ ಬರೆಯ ಸಮೀಪ ಪಿಲ್ಲರ್ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಸುಳ್ಯ ಶಾಸಕರು, ಸಚಿವರೂ ಆಗಿರುವ ಎಸ್ ಅಂಗಾರ ಭೇಟಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸುವುದಲ್ಲದೇ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಒದಗಿಸುವ ಸಲುವಾಗಿ ಮುಖ್ಯಮಂತ್ರಿ ಜೊತೆ ಮಾತನಾಡುವುದಾಗಿ ಸಚಿವ ಅಂಗಾರ ತಿಳಿಸಿದ್ದಾರೆ.
ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಸುಳ್ಯ ತಹಶೀಲ್ದಾರ್ ಮಂಜುನಾಥ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ನ.ಪಂ ಮುಖ್ಯಾಧಿಕಾರಿ ಸುಧಾಕರ್, ನಗರ ಪಂಚಾಯತ್ ಸದಸ್ಯರಾದ ಕೆ.ಎಸ್ ಉಮ್ಮರ್, ರಿಯಾಜ್, ಸುಶೀಲಾ ಜಿನ್ನಪ್ಪ, ಶರೀಫ್ ಕಂಠಿ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತಿತರ ಹಲವರು ಭೇಟಿ ನೀಡಿದ್ದಾರೆ.