ಪುತ್ತೂರು ಕಾಂಗ್ರೆಸ್ ಟಿಕೆಟ್ ಫೈಟ್: ಎಂ ಬಿ ವಿಶ್ವನಾಥ ರೈ ಹೆಸರೂ ಚರ್ಚೆಯಲ್ಲಿ..!
ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ತೀವ್ರ ಪೈಪೋಟಿ ನಡೆಯುತ್ತಿರುವ ಮಧ್ಯೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರ ಹೆಸರು ಇದೀಗ ಮುನ್ನೆಲೆಗೆ ಬಂದಿದೆ ಎಂದು ತಿಳಿದು ಬಂದಿದೆ.

ಟಿಕೆಟ್ ಆಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿದ್ದ 14 ಮಂದಿ ಆಕಾಂಕ್ಷಿಗಳ ಪೈಕಿ ಎಂ.ಬಿ ವಿಶ್ವನಾಥ ರೈ ಕೂಡಾ ಒಬ್ಬರು. ಇದೀಗ ಕೆಪಿಸಿಸಿ ಹಾಗೂ ಎಐಸಿಸಿ ಮಟ್ಟದಲ್ಲಿ ಪುತ್ತೂರಿನ ಟಿಕೆಟ್ ಗೆ ಪ್ರಬಲ ಪೈಪೋಟಿಯಿರುವುದರಿಂದ ಪರ್ಯಾಯವಾಗಿ ಎಂ.ಬಿ ವಿಶ್ವನಾಥ ರೈ ಅವರಿಗೆ ಟಿಕೆಟ್ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ಕಳೆದ ಕೆಲವು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುತ್ತಿರುವ ಅವರು ‘ಕೂಲ್ ಲೀಡರ್’ ಎಂದೇ ಖ್ಯಾತಿ ಪಡೆದಿದ್ದಾರೆ. ಮಾತ್ರವಲ್ಲದೆ ಪುತ್ತೂರಿನಲ್ಲಿ ಕಾಂಗ್ರೆಸಿನೊಳಗೆ ವಿವಿಧ ಬಣಗಳಿದ್ದರೂ ಎಲ್ಲರೊಂದಿಗೆ ಆತ್ಮೀಯವಾಗಿದ್ದುಕೊಂಡು ಎಲ್ಲರನ್ನೂ ಪಕ್ಷದಲ್ಲಿ ಒಟ್ಟಿಗೆ ಕರೆದುಕೊಂಡು ಹೋಗಲು ಇವರು ಪ್ರಯತ್ನಿಸಿದ್ದರು. ಒಟ್ಟಾರೆಯಾಗಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ಉತ್ತಮ ಹೆಸರನ್ನು ಇವರು ಪಡೆದಿದ್ದಾರೆ.