ಬಿ.ಎಂ ಫಾರೂಕ್ ನೇತೃತ್ವದಲ್ಲಿ ಸಿದ್ದಗೊಳ್ಳಲಿದೆ ಜೆಡಿಎಸ್ ಚುನಾವಣಾ ಪ್ರಣಾಳಿಕೆ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯರಾದ ಬಿ.ಎಂ ಫಾರೂಕ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಸಿದ್ದಗೊಳ್ಳಲಿದೆ.

ಬಿ.ಎಂ ಫಾರೂಕ್ ಅವರ ನೇತೃತ್ವದಲ್ಲಿ ನಾಲ್ವರು ಸದಸ್ಯರ ‘ಜನತೆಯ ನಿರೀಕ್ಷೆಗಳಿಗೆ – ಜನತಾ ಪ್ರಣಾಳಿಕೆ’ ಹೆಸರಿನ ಪ್ರಣಾಳಿಕೆ ರಚನೆ ಸಮಿತಿಯನ್ನು ರಚಿಸಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಬಿ.ಎಂ ಫಾರೂಕ್ ಅಧ್ಯಕ್ಷತೆಯ ಸಮಿತಿಯಲ್ಲಿ ಜೆಡಿಎಸ್ ಶಾಸಕರಾದ ಬಂಡೆಪ್ಪ ಖಾಶೆಂಪೂರ್ ಮತ್ತು ಮಾಜಿ ಸಂಸದರಾದ ಕುಪೇಂದ್ರ ರೆಡ್ಡಿ ಅವರು ಸದಸ್ಯರಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ಕೆ.ಎ ತಿಪ್ಪೇಸ್ವಾಮಿ ಅವರು ಸದಸ್ಯ ಹಾಗೂ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.
ಜೆಡಿಎಸ್ ಪಕ್ಷ ಹೆಚ್ಚಾಗಿ ರೈತರ ಪರವಾಗಿ ವಿವಿಧ ಯೋಜನೆಗಳನ್ನು ಘೋಷಿಸುತ್ತಿದ್ದು ರೈತಾಪಿ ಸಮುದಾಯದ ಹಿತ ಕಾಪಾಡಲು ಹೆಚ್ಚಿನ ಆದ್ಯತೆ ನೀಡುತ್ತಿದೆ. ಇದೀಗ ಬಿ.ಎಂ ಫಾರೂಕ್ ಅವರ ನೇತೃತ್ವದಲ್ಲಿ ತಯಾರಾಗುವ ಚುನಾವಣಾ ಪ್ರಣಾಳಿಕೆ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.