ಸುಳ್ಯದಲ್ಲಿ ಅಂಗಾರಗೆ ಟಿಕೆಟ್ ನೀಡದ್ದಕ್ಕೆ ಅಸಮಾಧಾನ: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ
ಸುಳ್ಯದಲ್ಲಿ ಸಚಿವ ಎಸ್.ಅಂಗಾರರಿಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಅಸಮಾಧಾನಗೊಂಡು ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಹಿರಿಯ ಮುಖಂಡ ವೆಂಕಟ್ ವಳಲಂಬೆ ರಾಜೀನಾಮೆ ನೀಡಿದ್ದಾರೆ.
ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಮತ್ತು ಕಳೆದ 30 ವರ್ಷಗಳಿಂದ ಸುಳ್ಯ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ಎಸ್.ಅಂಗಾರರು ಸೇವೆ ಸಲ್ಲಿಸಿದ್ದು ಅವರನ್ನು ಗಣನೆಗೆ ತೆಗ್ರದುಕೊಳ್ಳದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿರುತ್ತದೆ. ಆದುದರಿಂದ ನನ್ನ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಈ ಕ್ಷಣದಿಂದಲೇ ರಾಜೀನಾಮೆ ನೀಡಿದ್ದೇನೆ ಎಂದು ಜಿಲ್ಲಾ ಅಧ್ಯಕ್ಷರಾದ ಶ್ರೀ ಸುದರ್ಶನ ಮೂಡಬಿದಿರೆ ಇವರಿಗೆ ರಾಜೀನಾಮೆ ಸಲ್ಲಿಸಿರುತ್ತೇನೆ ಎಂದು ವೆಂಕಟ್ ವಳಲಂಬೆ ತಿಳಿಸಿದ್ದಾರೆ.