ಕಾಪು: ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಸೊರಕೆ
ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆಯ ವಿನಯ ಕುಮಾರ್ ಅವರು ಎ.18ರಂದು ನಾಮಪತ್ರ ಸಲ್ಲಿಸಿದ್ದಾರೆ.

ಮೆರವಣಿಗೆ ಮೂಲಕ ಸಾವಿರಾರು ಬೆಂಬಲಿಗರು, ಕಾರ್ಯಕರ್ತರ ಜೊತೆ ಬಂದ ಸೊರಕೆ ಅವರು ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಎಂ.ಎ ಗಫೂರ್, ಸಂತೋಷ್ ಕುಲಾಲ್, ದಿವಾಕರ ಶೆಟ್ಟಿ, ವಿಲ್ಸನ್ ಮತ್ತಿತರ ಹಲವರು ಉಪಸ್ಥಿತರಿದ್ದರು. ನಾಮ ಪತ್ರ ಸಲ್ಲಿಕೆಗೂ ಮೊದಲು ಮಸೀದಿ, ದೇವಸ್ಥಾನ, ಚರ್ಚ್‌ಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.





