ಪುತ್ತೂರು: ಗೋಮಾಂಸ ಮಾರಾಟ-ಆರೋಪಿ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪಡೀಲ್ ಸಮೀಪದ ಕೊಟೆಚ ಕ್ರಾಸ್ ಬಳಿ ಅಕ್ರಮವಾಗಿ ಸಾಗಾಟ ಮಾಡುತಿದ್ದ ಗೋ ಮಾಂಸವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಸೈದು ಎಂಬವರ ವಿರುದ್ಧ ಕರ್ನಾಟಕ ಜಾನುವಾರು ಪ್ರತಿಭಂದಕ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.
ಪಡೀಲ್ ನಲ್ಲಿರುವ ಕೋಳಿ ಅಂಗಡಿಯಲ್ಲಿ ದನದ ಮಾಂಸವನ್ನು ಮಾರಾಟ ಮಾಡುತ್ತಿರುವ ಆರೋಪದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಠಾಣೆಗೆ ತೆರಳಿ ಮಾತುಕತೆ ನಡೆಸಿದ್ದರು