ಕರಾವಳಿರಾಜಕೀಯ

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಗೆ ಕರೆ ಮಾಡಿದ ಯಡಿಯೂರಪ್ಪ

ಪುತ್ತೂರು: ಪುತ್ತೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎ.23ರಂದು ಕರೆ ಮಾಡಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದರು ಎಂದು ವರದಿಯಾಗಿದೆ.

ಯಡಿಯೂರಪ್ಪ ಕರೆಗೆ ಉತ್ತರಿಸಿರುವ ಪುತ್ತಿಲ ಅವರು, ಕಾರ್ಯಕರ್ತರ ತೀರ್ಮಾನದಂತೆ ನಾನು ಈ ನಿರ್ಧಾರ ತೆಗೆದುಕೊಂಡಿರುವುದರಿಂದ ಇಲ್ಲಿ ನನ್ನ ತೀರ್ಮಾನವೇನೂ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೂ ಪುತ್ತಿಲ ಅವರಿಗೆ ಕರೆ ಮಾಡಿರುವುದಾಗಿ ವರದಿಯಾಗಿದೆ.

ಏ.23ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅರುಣ್ ಕುಮಾರ್ ಪುತ್ತಿಲ ಅವರಿಗೆ ದೂರವಾಣಿ ಕರೆ ಮಾಡಿ,ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಸಲಹೆ ನೀಡಿದ್ದರಲ್ಲದೆ, ಪಕ್ಷದಲ್ಲಿ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ ಎಂದು ಹೇಳಿ,ಭಿನ್ನಾಭಿಪ್ರಾಯಗಳೆಲ್ಲವನ್ನೂ ಬಿಟ್ಟು ಎಲ್ಲರೂ ಸೇರಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಕೆಲಸ ಮಾಡೋಣ ಎಂದು ಹೇಳಿದ್ದರು. ಇದಕ್ಕೆ ಪುತ್ತಿಲ ಅವರು ಒಪ್ಪದ ಕಾರಣ ಮಾತುಕತೆ ಯಶಸ್ವಿಯಾಗಿಲ್ಲ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!