ಬಾವ-ಬಾವಮೈದನರ ನಡುವೆ ಗಲಾಟೆ, ಜಮಾಲ್ ಮೃತ್ಯು: ಮೂಡಬಿದಿರೆಯಲ್ಲಿ ನಡೆದ ಘಟನೆ
ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದನರ ನಡುವಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಹೃದಯ ವಿದ್ರಾವಕ ಘಟನೆ ಮೂಡುಬಿದಿರೆ ಗಂಟಾಲ್ಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಜಮಾಲ್ ಎಂದು ಗುರುತಿಸಲಾಗಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿ. ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಯಾವುದೊ ಸಣ್ಣ ವಿಚಾರದಲ್ಲಿ ಇಂದು ಬೆಳಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ ಗಲಾಟ ನಡೆದಿದ್ದು ಈ ವೇಳೆ ಸುಹೈಬ್ ಅವರು ಜಮಾಲ್ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.ಇದರಿಂದ ಗಂಭೀರ ಗಾಯಗೊಂಡ ಸುಹೈಬ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಗಿ ತಿಳಿದು ಬಂದಿದೆ.