ವಿಧಾನ ಸಭಾ ಚುನಾವಣೆ: 4 ಸ್ಥಾನ ಗೆದ್ದ ಇತರರು ಯಾರೆಲ್ಲ ಗೊತ್ತೇ..?

ಕರ್ನಾಟಕ ವಿಧಾನಸಭೆ ಚುನಾವಣೆಯ 224 ಕ್ಷೇತ್ರಗಳ ಪೈಕಿ ನಾಲ್ಕು ಸ್ಥಾನ ಇತರರ ಪಾಲಾಗಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹಾಗೂ ಸರ್ವೋದಯ ಕರ್ನಾಟಕ ಪಕ್ಷದಿಂದ ಒಬ್ಬೊಬ್ಬರು ಜಯ ಗಳಿಸಿದ್ದಾರೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
◼️ಫುಟ್ಬಾಲ್ ಚಿಹ್ನೆಯೊಂದಿಗೆ ಗಂಗಾವತಿಯಲ್ಲಿ ಸ್ಪರ್ಧೆ ಮಾಡಿದ್ದ ಜನಾರ್ದನ ರೆಡ್ಡಿ ಗೆಲುವಿನ ನಗೆ ಬೀರಿದ್ದಾರೆ.
◼️ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಪುಟ್ಟಣಯ್ಯ ಜಯ ಗಳಿಸಿದ್ದಾರೆ. ಇವರಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿತ್ತು.
◼️ಪಕ್ಷೇತರರಾಗಿ ಹರಪನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದ (ಮಾಜಿ ಉಪಮುಖ್ಯಮಂತ್ರಿ ದಿ. ಎಂ.ಪಿ. ಪ್ರಕಾಶ್ ಅವರ ಪುತ್ರಿ) ಎಂ.ಪಿ. ಲತಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. ◼️ಗೌರಿಬಿದನೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ಧ ಪುಟ್ಟಸ್ವಾಮಿ ಗೌಡ ಜಯ ಸಾಧಿಸಿದ್ದಾರೆ.