ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಶೋಕ್ ಕುಮಾರ್ ರೈ
ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಭೇರಿ ಬಾರಿಸಿರುವ ಅಶೋಕ್ ಕುಮಾರ್ ರೈ ಅವರು ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುಟಿ ಖಾದರ್ ಹಾಗೂ ಅಶೋಕ್ ರೆ ಮಾತ್ರ ಕಾಂಗ್ರೆಸ್ ನಿಂದ ವಿಧಾನಸಭೆ ಪ್ರವೇಶಿಸಿದ್ದು ಯುಟಿ ಖಾದರ್ ಅವರಿಗೆ ಉನ್ನತ ಸ್ಥಾನಮಾನಗಳು ಲಭಿಸಲಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದರಿಂದ ಮತ್ತು ಮುಂದಿನ ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ಮಾಡುವ ನಿಟ್ಟಿನಲ್ಲಿ ಅಶೋಕ್ ಕುಮಾರ್ ರೈ ರವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ನಿಶ್ಚಲವಾಗಿದೆ.
ಈ ಬಗ್ಗೆ ಮೇ 14ರಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ.