ಇಂದು ಡಿಕೆಶಿ ದೆಹಲಿಗೆ: ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಅಂತಿಮಗೊಳ್ಳುವ ಸಾಧ್ಯತೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು (ಮೇ .16 ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ದೇವನಹಳ್ಳಿ ವಿಮಾನ ನಿಲ್ದಾಣದಿಂದ ವಿಮಾನದಲ್ಲಿ ದೆಹಲಿಗೆ ಹೋಗುತ್ತಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಚರ್ಚಿಸಲು ಪಕ್ಷದ ವರಿಷ್ಠರ ಆಹ್ವಾನದ ಪ್ರಯುಕ್ತ ದೆಹಲಿಗೆ ತೆರಳುತ್ತಿದ್ದಾರೆ.

ಮೇ.15ರಂದು ಸಂಜೆ ದೆಹಲಿಗೆ ಹೋಗಬೇಕಾಗಿದ್ದ ಡಿಕೆ ಶಿವಕುಮಾರ್ ಅವರು ಅನಾರೋಗ್ಯ ಕಾರಣ ತಮ್ಮ ದೆಹಲಿ ಭೇಟಿಯನ್ನು ದಿಢೀರ್ ರದ್ದು ಮಾಡಿದ್ದರು. ಇಂದೇ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.