ಉಡುಪಿ ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನ
ಉಡುಪಿ ಮಾಜಿ ಶಾಸಕ, ಹಿರಿಯ ರಾಜಕಾರಣಿ ಯು.ಆರ್. ಸಭಾಪತಿ(71. ವ) ಮೇ.21ರಂದು ನಿಧನ ಹೊಂದಿದ್ದಾರೆ. ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಇವರು 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು.
ಬಳಿಕ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ಮರು ಆಯ್ಕೆಯಾಗಿದ್ದರು. ನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.