ರಾಜಕೀಯರಾಜ್ಯ

ಡಿಕೆಶಿ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ..!



ಬೆಂಗಳೂರು: ಇದು ಆಶ್ಚರ್ಯ ಆದರೂ ನಿಜ. ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆಯೇ ಶಾಸಕರೊಬ್ಬರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿ ಅಚ್ಚರಿಗೆ ಕಾರಣವಾದರು.

ಇದಕ್ಕೆ ಸದನದಲ್ಲೇ ಆಕ್ಷೇಪ ವ್ಯಕ್ತವಾಯಿತು. ಮಧ್ಯ ಪ್ರವೇಶಿಸಿದ ಸ್ಪೀಕರ್ ಆರ್.ವಿ.ದೇಶಪಾಂಡೆ ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣ ಮಾಡದಂತೆ ಸೂಚನೆ ನೀಡಿದರು.

ಅಲ್ಲದೆ ದೇವರು ಅಥವಾ ಸಂವಿಧಾನದ ಹೆಸರಿನಲ್ಲಿ ಮಾತ್ರ ಪ್ರಮಾಣ ವಚನ ಸ್ವೀಕರಿಸಬೇಕು, ಬೇರೆ ಯಾವುದೇ ಹೆಸರಿನಲ್ಲಿ ಸ್ವೀಕರಿಸಬಾರದು ಎಂದು ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!