ಪ್ರವೀಣ್ ನೆಟ್ಟಾರು ಪತ್ನಿಗೆ ಬಿಜೆಪಿ ಮೋಸ ಮಾಡಿದೆ: ರಾಮಲಿಂಗಾರೆಡ್ಡಿ
ಬೆಂಗಳೂರು: ಅನುಕಂಪದ ಆಧಾರದಲ್ಲಿ ಸಿಎಂ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದಿ. ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿಯನ್ನು ಉದ್ಯೋಗದಿಂದ ಮುಕ್ತಿಗೊಳಿಸಿರುವ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಪ್ರವೀಣ್ ನೆಟ್ಟಾರು ಪತ್ನಿಗೆ ತಾತ್ಕಾಲಿಕ ಹುದ್ದೆಯನ್ನು ನೀಡುವ ಮೂಲಕ ಬಿಜೆಪಿ ಮೋಸ ಮಾಡಿದೆ ಎಂದು ಎಂದು ಹೇಳಿದ್ದಾರೆ.

ಪ್ರವೀಣ್ ನೆಟ್ಟಾರು ಪತ್ನಿಗೆ ತಾತ್ಕಾಲಿಕ ಹುದ್ದೆ ಯಾಕೆ ಕೊಡ್ಬೇಕಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ಕಖಾಯಂ ಉದ್ಯೋಗವನ್ನೇ ಕೊಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.