ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ… ವೈರಲ್ ಆಗಿರುವ ಪಟ್ಟಿ ನಕಲಿ..!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ವಿಸ್ತರಣೆ ಬಳಿಕ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದು ನಕಲಿ ಪಟ್ಟಿ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.

‘ಇನ್ನೂ ಯಾವುದೇ ಸಚಿವರಿಗೆ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ.