ಒಡಿಶಾ ರೈಲು ದುರಂತದಲ್ಲಿ ಬೆಂಗಳೂರಿನ ಹೊಟೇಲ್ ಕಾರ್ಮಿಕ ಸಾವು
ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಬೆಂಗಳೂರಿನ ಹೊಟೇಲ್ ನಲ್ಲಿ ಕೆಲಸಕ್ಕಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಹೌರಾ ಎಕ್ಸ್ಪ್ರೆಸ್ನಲ್ಲಿದ್ದ ಕನಿಷ್ಠ 36 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಿವಾಸಿ ಸಾಗರ್ ಖೇರಿಯಾ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ. 30 ವರ್ಷದ ಖೇರಿಯಾ ಅವರು ಬೆಂಗಳೂರಿನ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಮನೆಗೆ ಹಿಂದಿರುಗುತ್ತಿದ್ದಾಗ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಅವರು ಜಲ್ಪೈಗುರಿ ಜಿಲ್ಲೆಯ ನಗರಕಟಾ ಬ್ಲಾಕ್ನಿಂದ ಇತರ 13 ಜನರೊಂದಿಗೆ ಪ್ರಯಾಣಿಸಿದ್ದರು ಎನ್ನಲಾಗಿದೆ.