ನೈತಿಕ ಪೊಲೀಸ್ ಗಿರಿ ತಡೆಗೆ Anti Communal Wing ಆರಂಭಿಸಲು ಗೃಹ ಸಚಿವರ ಸೂಚನೆ
ಮಂಗಳೂರು: ನೈತಿಕ ಪೊಲೀಸ್ ಗಿರಿ ತಡೆಗೆ ಗೃಹ ಸಚಿವರು ಮುಂದಾಗಿದ್ದಾರೆ. ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ Anti Communal Wing ಆರಂಭಿಸಲು ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ ಮಂಗಳೂರಿನಲ್ಲಿ ಪಶ್ಚಿಮ ವಲಯದ ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಗೃಹ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕೋಮು ಸೌಹಾರ್ದ ಕಾಪಾಡಲು ಕಠಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಬೇರೆ ಕಡೆ ಅಗತ್ಯ ಬಿದ್ದರೆ ಅಲ್ಲಿಯೂ ವಿಂಗ್ ರಚಿಸಲಾಗುವುದು ಎಂದರು.
ಇಲ್ಲಿನ ಜನರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಬೇಕಾಗಿದೆ. ಡ್ರಗ್ಸ್ ನಿಯಂತ್ರಣಕ್ಕೆ ಅಭಿಯಾನ ನಡೆಸಲು ಸೂಚಿಸಿದ್ದು, ಆ.15 ರೊಳಗೆ ಡ್ರಗ್ಸ್ ಚಟುವಟಿಕೆ ಹತ್ತಿಕ್ಕಲು ಗಡುವು ನೀಡಿದ್ದೇನೆ ಎಂದರು.