ಕೊಡಗು: ಸುಂಟಿಕೊಪ್ಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಎರಡು ದಿನಗಳ ಹಿಂದೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಮೂಲದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣುಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಂಟಿಕೊಪ್ಪದಲ್ಲಿ ಘಟನೆ ನಡೆದಿದ್ದು, ಮೃತಪಟ್ಟ ಯುವಕನನ್ನು ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23. ವ) ಎಂದು ಗುರುತಿಸಲಾಗಿದೆ.

ಎರಡು ದಿನಗಳಿಂದ ನಾಪತ್ತೆಯಾಗಿದ್ದ ವಿಜಯರ ಮೃತದೇಹ ಜೂ.5ರಂದು ಸಂಜೆ ತೋಟದ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು
ಕಾರ್ಮಿಕರು ಕೆಲಸ ಮಾಡಿ ತೆರಳುವ ವೇಳೆ ಯುವಕ ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಕಂಡುಬಂದಿದೆ.
ಯುವಕನ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.