ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರು ವಿಧಾನಸಬಾ ಕ್ಷೆತ್ರದ ಅಭಿವೃದ್ದಿಯ ಕುರಿತು ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿಗೆ ತೆರಳಿ ಅವರೊಡನೆ ಮಾತುಕತೆ ನಡೆಸಿದ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೇಡಿಕೆಗಳನ್ನು ಮುಂದಿಟ್ಟು ಅವರ ಜೊತೆ ಚರ್ಚೆ ನಡೆಸಿದರು.

ಈಗಾಗಲೇ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಪುತ್ತೂರು ಜಿಲ್ಲಾ ಕೇಂದ್ರ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಶಾಸಕರು ಚರ್ಚೆ ನಡೆಸಿದರು.
ಶಾಸಕರಾದ ಬಳಿಕ ಪ್ರಥಮ ಬಾರಿಗೆ ಸಿಎಂ ಅವರನ್ನು ಅಭಿವೃದ್ದಿ ವಿಚಾರವಾಗಿ ಶಾಸಕರು ಚರ್ಚೆ ನಡೆಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಗಬೇಕಾದ ಅಭಿವೃದ್ದಿ ಕಾರ್ಯಗಳು ಮತ್ತು ಜನರ ಬೇಡಿಕೆ ಇರುವ ಯೋಜನೆಗಳ ಬಗ್ಗೆಯೂ ಸಿಎಂ ಜೊತೆ ಶಾಸಕರು ಚರ್ಚೆ ನಡೆಸಿದ್ದಾರೆ. ಪುತ್ತೂರಿಗೆ ಮೆಡಿಕಲ್ ಕಾಲೇಜು ಆಗಬೇಕೆಂಬ ಇಲ್ಲಿನ ಮಂದಿಯ ಬಹುಕಾಲದ ಕನಸು ಈ ಬಾರಿ ನನಸಾಗಬೇಕಿದೆ. ಇದಕ್ಕಾಗಿ ಹೆಚ್ಚಿನ ಮುತುವರ್ಜಿ ವಹಿಸುವಂತೆಯೂ ಸಿಎಂ ಬಳಿ ಶಾಸಕರು ಮನವಿಮಾಡಿಕೊಂಡರು.
ಮುಖ್ಯಮಂತ್ರಿಗಳು ಶಾಸಕರ ಅಭಿವೃದ್ದಿ ಮುತುವರ್ಜಿಯನ್ನು ಕಂಡು ಸಂತೋಷ ವ್ಯಕ್ತಪಡಿಸಿದರು. ಮುಂದಿನ ಐದು ವರ್ಷಗಳಲ್ಲಿ ಪುತ್ತೂರು ವಿಧಾನಸಬಾ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ಮತ್ತು ತಮ್ಮ ಬೇಡಿಕೆಯನ್ನು ಈಡೇರಿಸುವ ಬಗ್ಗೆ ಭರವಸೆಯನ್ನು ನೀಡಿದರು.