ಟಾಟಾ ಸ್ಟೀಲ್ ಕಾರ್ಖಾನೆಯಲ್ಲಿ ಸ್ಫೋಟ: 19 ಮಂದಿಗೆ ಗಾಯ
ಟಾಟಾ ಸ್ಟೀಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿರುವ ಘಟನೆ ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ 19 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ತೀವ್ರವಾಗಿ ಗಾಯಗೊಂಡ ಕೆಲವರನ್ನು ಕಟಕ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂ 13ರಂದು ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಈಗಾಗಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಬಂದಿದ್ದು, ರಕ್ಷಣೆ ಕಾರ್ಯ ಕೈಗೊಳ್ಳಲಾಗಿದೆ.