ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿ ಕೆಲಕಾಲ ಮಾತುಕತೆ ನಡೆಸಿದರು.
ಇದಕ್ಕೂ ಮೊದಲು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ರೇಣುಕಾಚಾರ್ಯ ಭೇಟಿಯಾಗಿದ್ದರು.