ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ; ಪಠ್ಯ ಪುಸ್ತಕ ಪರಿಷ್ಕರಣೆ: ಸಂಪುಟ ಸಭೆಯಲ್ಲಿ, ಮಹತ್ವದ ತೀರ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಜೂನ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ ಎಂದು ತಿಳಿದು ಬಂದಿದೆ.