ಕರಾವಳಿಕ್ರೈಂ

ಸವಾದ್ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು: ಬಂಟ್ವಾಳ ಮೂಲದ ಇಬ್ಬರ ಬಂಧನ



ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ದೇವರಮನೆ ಸಮೀಪ ಮೃತದೇಹವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸವಾದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿದೆ.

ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ದ.ಕ ಜಿಲ್ಲೆಯ ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎನ್ನಲಾಗಿದೆ. ಪ್ರಕರಣವನ್ನು ಕ್ಷೀಪ್ರಗತಿಯಲ್ಲಿ ಭೇದಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!