ಖಿದ್ಮಾ ರಾಜ್ಯಮಟ್ಟದ ಕವಿಗೋಷ್ಠಿಗೆ ತನ್ಸೀರಾ ಆತೂರು ಆಯ್ಕೆ
ಪುತ್ತೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಿದ್ದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಭಾಗವಹಿಸಿ, ಖಿದ್ಮಾ ರಾಜ್ಯಮಟ್ಟದ ಕವಿಗೋಷ್ಠಿಗೆ ಶಿಕ್ಷಕಿ, ಸಾಹಿತಿ ತನ್ಸೀರಾ ಆತೂರು ಆಯ್ಕೆಯಾಗಿದ್ದಾರೆ.

ಇವರು ಜುಲೈ 9ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜನೆ ಮಾಡಲಾಗಿರುವ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲಿದ್ದಾರೆ ಎಂದು ಆಯೋಜಕರು ಹಾಗೂ ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ರಾಜ್ಯ ಸಂಚಾಲಕರಾದ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.