ರಾಜಕೀಯರಾಜ್ಯ

ನಾಳೆಯಿಂದ ಬಜೆಟ್ ಅಧಿವೇಶನ: ಇಂದು ಬಿಜೆಪಿಯಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯತೆ

ಜುಲೈ 3 ರಂದು ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಪಕ್ಷದ ಹಲವು ಹಿರಿಯ ನಾಯಕರು ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಈ ನಿರ್ಧಾರ ನಿರ್ಣಾಯಕವಾಗಲಿದೆ ಎಂದು ಹೇಳಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರ್. ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!