ನಾಳೆಯೂ(ಜು.6) ದಕ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜು.6 ಗುರುವಾರವೂ ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬುಧವಾರ ಸಂಜೆ ಸುತ್ತೋಲೆ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.