ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ(79. ವ) ಜು.18ರ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಕ್ಯಾನ್ಸರ್ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಫೆ. 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.