ಮಣಿಪುರ ಘಟನೆ: ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ- ಮೋದಿ
ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆಯರ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಮೋದಿ ಖಂಡನೆ ವ್ಯಕ್ತಪಡಿಸಿದ್ದಾರೆ. ಮಣಿಪುರ ಘಟನೆಯಿಂದ ನೋವಾಗಿದೆ, ಇದು ಇಡೀ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ಈ ಘಟನೆಯಿಂದ ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆಯಾಗಿದೆ. ಈ ಘಟನೆ ತುಂಬಾ ನೋವುಂಟು ಮಾಡಿದೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದು, ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ. ಈ ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.