ಮದುವೆಯಾಗುತ್ತೇನೆಂದು ನಂಬಿಸಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿ ಮೇಲೆ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲು
ಮದುವೆಯಾಗುತ್ತೇನೆಂದು ನಂಬಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯೊಬ್ಬನ ಮೇಲೆ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಗೆ ಆರೋಪಿ ಅಬ್ದುಲ್ ಸಮೀರ್ ಎಂಬಾತ ಮೊಬೈಲ್ ಕೊಟ್ಟು, ನಿರಂತರ ಮಾತನಾಡಿಕೊಂಡು ಪ್ರೀತಿಸುವ ನಾಟಕವಾಡಿದ್ದಲ್ಲದೆ, ಮದುವೆಯಾಗುತ್ತೇನೆಂದು ನಂಬಿಸಿದ್ದ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆಯೊಂದರ ಬಳಿ 2019ನೇ ಸಾಲಿನ ನವಂಬರ್ ತಿಂಗಳಿನಿಂದ ಡಿಸೆಂಬರ್ ತಿಂಗಳ ಕೊನೆಯ ವಾರದ ತನಕ ಆತ ನಿರಂತರ ಅತ್ಯಾಚಾರವೆಸಗಿದ್ದಾನೆ. ಆಕೆಗೆ ಮೋಸ ಮಾಡಿದ್ದಲ್ಲದೆ, ವಿದೇಶಕ್ಕೆ ಪರಾರಿಯಾಗಿದ್ದಾನೆ. ಇದೀಗ ಆತನ ವಿರುದ್ದ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ.