ಜಿಲ್ಲೆ

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

ಕೊಡಗು: ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆ ಕಂಡಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆ ಮೇಲೆ 2 ಅಡಿಗೂ ಹೆಚ್ಚು ನೀರು ನಿಂತಿದ್ದು ಭಾಗಮಂಡಲ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಜನಜೀವನ ಅಸ್ಯವ್ಯಸ್ತವಾಗಿದ್ದು, ಜನರು ಸಂಚರಿಸಲು ಪರದಾಡುತ್ತಿದ್ದಾರೆ.

ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಬೋಟ್ ವ್ಯವಸ್ಥೆ ಮಾಡಿದೆ. ಭಾಗಮಂಡಲದಲ್ಲಿ ಒಂದು ತಿಂಗಳಿನಿಂದ ಗೃಹ ರಕ್ಷಕ ದಳದ ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ವಾಹನಗಳು ನಿಂತಲ್ಲೇ ನಿಂತಿವೆ. ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮೆಟ್ಟಿಲಿನವರೆಗೂ ನೀರು ಏರಿಕೆಯಾಗಿದ್ದರಿಂದ ದೇವಸ್ಥಾನಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಭಾರಿ ಗಾಳಿ ಮಳೆಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹೀಗಾಗಿ, ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಕಳೆದ ಕೆಲವು ದಿನಗಳಿಂದ ಬೆಂಬಿಡದೆ ಮಳೆ ಸುರಿಯುತ್ತಿರುವುದರಿಂದ ಕಾವೇರಿ ಮತ್ತು ಉಪನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಾರಂಗಿ ಡ್ಯಾಂ ಒಳ ಹರಿವಿನ ಪ್ರಮಾಣ ಹೆಚ್ಚಾಗಿದ್ದು, 20 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಾರಂಡಿ ಡ್ಯಾಂನಿಂದ ಹೊರಹರಿವು ಹೆಚ್ಚಾದ ಕಾರಣ ಸೇತುವೆ ಮುಳುಗಡೆಯಾಗಿದೆ. ಹಾರಂಗಿ – ಯಡವನಾಡು ರಸ್ತೆ ಸಂಪರ್ಕ ಕಡಿತವಾಗಿದೆ.

Leave a Reply

Your email address will not be published. Required fields are marked *

error: Content is protected !!