ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಮೂವರು ವಿದ್ಯಾರ್ಥಿನಿಯರ ವಿರುದ್ಧ ಸುಮೋಟೋ ಕೇಸ್ ದಾಖಲು
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ವಿರುದ್ಧ ದೂರು ದಾಖಲಾಗಿದೆ. ಉಡುಪಿಯ ನೇತ್ರ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೋಲಿಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ.

ಉಡುಪಿಯ ನೇತ್ರ ಕಾಲೇಜು ಶೌಚಾಲಯದಲ್ಲಿ ಮೊಬೈಲ್ ಫೋನ್ ಇಟ್ಟು ಚಿತ್ರೀಕರಣ ಮಾಡಿದ ವಿಚಾರಕ್ಕೆ ಸಂಬಂಧಿಸಿ ಜುಲೈ 25ರಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವಾರ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಚಾರ ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ. ವಿಚಾರದ ಜೊತೆ ಬೇರೆ ಬೇರೆ ಉದ್ದೇಶದಿಂದ ಮಾಹಿತಿಗಳು ಶೇರ್ ಆಗುತ್ತಿದೆ. ಹಿಡನ್ ಕ್ಯಾಮರಾ ಮೂಲಕ ವಿಡಿಯೋ ಚಿತ್ರೀಕರಿಸಿದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಬ್ಯ್ಲಾಕ್ಮೇಲ್ ಬಗ್ಗೆ ವಿಡಿಯೋ ಹರಿದಾಡಿದ ಬಗ್ಗೆ ಗಮನ ಹರಿಸಿದ್ದೇವೆ. ಬೇರೆ ಕಡೆ ವಿಡಿಯೋ ಶೇರ್ ಆಗುತ್ತಿದೆ, ವಾಯ್ಸ್ ಎಡಿಟ್ ಮಾಡಲಾಗಿದೆ. ಸತ್ಯಾಸತ್ಯತೆ ಗೊತ್ತಿಲ್ಲದೆ ಎಲ್ಲೆಡೆ ವಿಡಿಯೋ ಶೇರ್ ಮಾಡಿದ್ರೆ ತಪ್ಪಾಗುತ್ತದೆ ಎಂದಿದ್ದರು.