ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್- ಐದು ಮಂದಿಯ ವಿರುದ್ಧ ಪ್ರಕರಣ ದಾಖಲು
ವಿಟ್ಲ : ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಗ್ಯಾಂಪ್ ರೇಪ್ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೆರುವಾಯಿ ಮೂಲದ ಬಾಲಕಿ ಮೇಲೆ ಕೇರಳ ಭಾಗದ ಮೂವರು ಹಾಗೂ ಬಾಲಕಿಯ ಸಂಬಂಧಿ ಸಹಿತ ಐದು ಯುವಕರಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ತಿಳಿದು ಬಂದಿದೆ.
ಬೇರೆ ಬೇರೆ ಸಮಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಬಾಲಕಿಯ ನಡವಳಿಕೆ ಬಗ್ಗೆ ಗಮನಿಸಿದ ಮನೆಯವರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ವಿಟ್ಲ ಠಾಣೆಗೆ ಆಗಮಿಸಿದ ಪೋಷಕರು ಘಟನೆಯ ಬಗ್ಗೆ ಕೇರಳ ಮೂಲದ ಕೆಲವು ಯುವಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.