ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರಗ ಜ್ಞಾನೇಂದ್ರ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಶಾಸಕ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ದ ವಾಗ್ದಾಳಿ ನಡೆಸಿದರು.
ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಸ್ತಾಪಿಸಿ ಮಾತನಾಡಿದ ಅವರು ‘ಸುಟ್ಟು ಕರಕಲಾಗಿರ್ತಾರೆ’ ನಮ್ಮ ಖರ್ಗೆಯವರನ್ನು ನೋಡಿದ್ರೆ ಗೊತ್ತಾಗುತ್ತೆ ಪಾಪ, ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆರಗ ಜ್ಞಾನೇಂದ್ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.