ಪುತ್ತೂರು: ನಗದು, ಚಿನ್ನ ಕಳ್ಳತನ ಪ್ರಕರಣದ ಆರೋಪಿಯ ಬಂಧನ
ಪುತ್ತೂರು: ಬನ್ನೂರು ಗ್ರಾಮದ ಆನೆಮಜಲಿನಲ್ಲಿ ನಡೆದಿದ್ದ 6.9 ಲಕ್ಷ ರೂ.ಮೌಲ್ಯದ 152 ಗ್ರಾಂ ಚಿನ್ನಾಭರಣ, 50 ಸಾವಿರ ರೂ.ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿ ತಮಿಳುನಾಡು ಸೇಲಂ ನಿವಾಸಿ ಸಂತೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.