ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರತಿಭಟನೆ-ನಳಿನ್
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ಬೀದಿಗಿಳಿಯಲು ಸಿದ್ಧವಾಗಿದೆ. ಆ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಪ್ರತಿಭಟನೆ ಬಳಿಕ ಮರುದಿನ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ನೀಡಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಲಾಗುವುದು ಎಂದರು.