ಅಕ್ರಮ ಸಂಬಂಧ ಆರೋಪ: ಇಬ್ಬರನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು..!
ಜೋಡಿಯೊಂದನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿರುವ ಅಮಾನವೀಯ ಘಟನೆ ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾ ಪಟ್ಟಣದಲ್ಲಿ ನಡೆದಿದೆ.
ಮದುವೆಯಾಗಿ ಎರಡು ಮಕ್ಕಳನ್ನು ಹೊಂದಿರುವ ವ್ಯಕ್ತಿ, ಅದೇ ಗ್ರಾಮದ ಯುವತಿಯೊಂದಿಗೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದ ಎನ್ನಲಾಗಿದೆ. ಆ.19 ರಂದು ವಿವಾಹಿತ ವ್ಯಕ್ತಿ ಹಾಗೂ ಯುವತಿ ಜೊತೆಯಾಗಿ ಇರುವುದನ್ನು ನೋಡಿದ ಗ್ರಾಮಸ್ಥರು ಇಬ್ಬರನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.
ಯುವತಿಯ ಕೂದಲನ್ನು ಹಿಡಿದು, ಆಕೆಯ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ್ದಾರೆ. ಥಳಿಸುವ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು ಕೂಡ ಯಾರೊಬ್ಬರೂ ಇವರ ಸಹಾಯಕ್ಕೆ ಬರಲಿಲ್ಲ ಎಂದು ತಿಳಿದು ಬಂದಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಬಂದು, ಕಂಬಕ್ಕೆ ಕಟ್ಟಿದವರನ್ನು ಬಿಡುಗಡೆ ಮಾಡಿದ್ದಾರೆ. ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.