ಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾಸ್ ಬಳಿಯಿಂದ ಕಿಲ್ಲೆ ಮೈದಾನದ ವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ ಸೆ.16ರಂದು ನಡೆಯಿತು. ಅಬ್ದುಲ್ ಹಮೀದ್ ಹನೀಫಿ ದುವಾ ನೆರವೇರಿಸಿದರು. ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಎಲ್.ಟಿ ಅಬ್ದುಲ್ ರಝಾಕ್ ಹಾಜಿಯವರು ಮಾಡಾವು ಸಂತೋಷ್ ಗ್ರೂಪ್ಸ್‌ನ ಹುಸೈನಾರ್ ಹಾಜಿಯವರಿಗೆ ಧ್ವಜ ಹಸ್ತಾಂತರ ಮಾಡುವ ಮೂಲಕ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದರು. ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ನ ಅಧ್ಯಕ್ಷ ಅಶ್ರಫ್ ಕಲ್ಲೇಗ, ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ನ ಪ್ರ.ಕಾರ್ಯದರ್ಶಿ ನೌಶಾದ್ ಹಾಜಿ ಬೊಳ್ವಾರು, ಸಂಚಾಲಕರಾದ ಅಡ್ವಕೇಟ್ ನೂರುದ್ದೀನ್ ಸಾಲ್ಮರ, ಕೋಶಾಧಿಕಾರಿ ಅಶ್ರಫ್ ಬಾವು, ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಪ್ರ.ಕಾರ್ಯದರ್ಶಿ ಖಾದರ್ ಖನ್ಝ್ ಕಬಕ, ಕೋಶಾಧಿಕಾರಿ ಇಕ್ಬಾಲ್ ಬಪ್ಪಳಿಗೆ ಹಾಗೂ ದ.ಕ ಮುಸ್ಲಿಂ ಯುವಜನ ಪರಿಷತ್ ಸದಸ್ಯರು ಹಾಗೂ ಮಿಲಾದ್ ಸಮಿತಿಯವರು, ಸಾರ್ವಜನಿಕರು ಉಪಸ್ಥಿತರಿದ್ದರು. ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ವಿವಿಧ ತಂಡಗಳ ದಫ್ ಪ್ರದರ್ಶನದೊಂದಿಗೆ ಪುತ್ತೂರು ಮುಖ್ಯ ರಸ್ತೆಯಾಗಿ ಕಿಲ್ಲೆ ಮೈದಾನದವರೆಗೆ ನಡೆದ
Read More