Author: news_bites_admin

ಕರಾವಳಿ

ಆ.6: ಕುಂಬ್ರ ವರ್ತಕರ ಸಂಘದಿಂದ ವರ್ತಕ ಸ್ನೇಹ ಸಂಜೆ

ಪುತ್ತೂರು: ವರ್ತಕರ ಸಂಘ ಕುಂಬ್ರ ಇದರ ಆಶ್ರಯದಲ್ಲಿ ವರ್ತಕ ಸ್ನೇಹ ಸಂಜೆ ಕಾರ್ಯಕ್ರಮ ಆ.6ರಂದು ಸಂಜೆ ಗಂಟೆ 4-00ರಿಂದ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಮತ್ತು ವಿಠಲ್ ನಾಯಕ್ ಅವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ. ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವರ್ತಕ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Read More
ಕರಾವಳಿ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿಗೆ ಚುನಾವಣೆ-ವೇಳಾ ಪಟ್ಟಿ ಪ್ರಕಟ

ಪುತ್ತೂರು: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಇದರ ಆಡಳಿತ ಮಂಡಳಿಗೆ ಚುನಾವಣೆಯ ವೇಳಾ ಪಟ್ಟಿ ಪ್ರಕಟಗೊಂಡಿದೆ. ಆ.4ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಂಡಿದ್ದು ಆ.8ರಿಂದ ಆ.17ರ ವರೆಗೆ ಪೂರ್ವಾಹ್ನ ಗಂಟೆ 11ರಿಂದ ಅಪರಾಹ್ನ ಗಂಟೆ 2ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.23ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ಆ.28 ಹಾಗೂ ಆ.29ರಂದು ಪೂರ್ವಾಹ್ನ ಗಂಟೆ 11ರಿಂದ ಅಪರಾಹ್ನ ಗಂಟೆ 1.30ರ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ಆ.31ರಂದು  ಅಪರಾಹ್ನ ಗಂಟೆ 5-00ಕ್ಕೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿ ಚಿಹ್ನೆ ಹಂಚಿಕೆ ಮಾಡಲಾಗುತ್ತದೆ. ಮತದಾನ ಅವಶ್ಯವಿದ್ದಲ್ಲಿ ಸೆ.9ರಂದು ಪೂವಾಹ್ನ 8 ಗಂಟೆಯಿಂದ ಅಪರಾಹ್ನ 3 ಗಂಟೆಯ ವರೆಗೆ ಮತದಾನ ನಡೆಯಲಿದ್ದು ಅಂದೇ ಸಂಜೆ ಗಂಟೆ ೪ರಿಂದ ಮತ ಎಣಿಕೆ ನಡೆದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾಧಿಕಾರಿ ಎಂ ಅಬೂಬಕ್ಕರ್ ತಿಳಿಸಿದ್ದಾರೆ. 

Read More
ರಾಷ್ಟ್ರೀಯ

ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ

Read More
ಕರಾವಳಿ

ಕಲ್ಲುಗುಂಡಿ ರಸ್ತೆ ಹೊಂ ದುರಸ್ತಿಪಡಿಸಿ ಮಾದರಿಯಾದ ವ್ಯಾಪಾರಿ

ಸುಳ್ಯ: ಕಲ್ಲುಗುಂಡಿ ಪೇಟೆಯ ಕೂಲಿಶೆಡ್ದ್ ಮಾಣಿ ಮೈಸೂರು ಹೆದ್ದಾರಿಯಲ್ಲಿ ರಸ್ತೆಯ ನಡು ಭಾಗದಲ್ಲಿ ಬೃಹತ್ ಹೊಂಡ ನಿರ್ಮಾಣವಾಗಿದ್ದು ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿತ್ತು. ಕೆಲವು ದ್ವಿಚಕ್ರ

Read More
ಕ್ರೈಂರಾಷ್ಟ್ರೀಯ

ಎನ್‌ಸಿಸಿ ವಿದ್ಯಾರ್ಥಿಗಳ ಮೇಲೆ ಅಮಾನುಷ ರೀತಿಯ ಹಲ್ಲೆ: ಆಘಾತಕಾರಿ ವಿಡಿಯೋ ವೈರಲ್

ಹಿರಿಯ ವಿದ್ಯಾರ್ಥಿಗಳು ಜೋಶಿ ಬೇಡೇಕರ್ ಕಾಲೇಜಿನ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್‌ಸಿಸಿ) ವಿದ್ಯಾರ್ಥಿಗಳನ್ನು ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಹಲ್ಲೆ ನಡೆಸಿ ಕ್ರೌರ್ಯ ಮೆರೆದ

Read More
ಜಿಲ್ಲೆ

ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ; ಉಡುಪಿಯಲ್ಲಿ ಮಹಿಳೆಯರಿಗೆ ಶರಣ್ ಪಂಪ್ವೆಲ್ ಕರೆ

ಉಡುಪಿ: ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ಸಿದ್ಧರಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತೀಯ ಕಾರ್ಯದರ್ಶಿ

Read More
ಕರಾವಳಿ

ಕಳಂಜದ ಮಸೂದ್ ಕೊಲೆ ಪ್ರಕರಣ: ಓರ್ವ ಆರೋಪಿಗೆ ಷರತ್ತು ಬದ್ಧ ಜಾಮೀನು

ಸುಳ್ಯ: ಕಳಂಜದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ 8ನೇ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ. ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

Read More
ಕರಾವಳಿ

ಮಣಿಪುರ ಘಟನೆ ಖಂಡಿಸಿ ಸುಳ್ಯದಲ್ಲಿ ಕ್ರೈಸ್ತ ಬಂಧವರಿಂದ ಪ್ರತಿಭಟನೆ

ಸುಳ್ಯ: ಮಣಿಪುರದಲ್ಲಿ ಚರ್ಚ್‌ಗಳ ಮೇಲೆ, ಹಾಗೂ ಕ್ರೈಸ್ತ ಧರ್ಮೀಯರ ಮೇಲೆ ನಡೆಯುತ್ತಿರುವ ದಾಳಿ, ದೌರ್ಜನ್ಯ ಕೃತ್ಯಗಳನ್ನು ನಿಯಂತ್ರಿಸುವಲ್ಲಿ ಮಣಿಪುರ ಸರಕಾರ ಹಾಗು ಕೇಂದ್ರ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಮತ್ತು ಮಣಿಪುರ ಸರಕಾರವನ್ನು ಕೂಡಲೇ ವಜಾಗೊಳಿಸುವಂತಗೆ ಒತ್ತಾಯಿಸಿ ಕ್ರೈಸ್ತ ಸಮುದಾಯದ ವತಿಯಿಂದ ಆ.3ರಂದು ಸುಳ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಸುಳ್ಯದ ಮುಖ್ಯ ರಸ್ತೆಯಲ್ಲಿ ಸಾಗಿದ ಪ್ರತಿಭಟನಾ ಮೆರವಣಿಗೆ ಸುಳ್ಯ ತಾಲೂಕು ಕಚೇರಿ ಬಳಿ ಸಮಾವೇಶಗೊಂಡಿತು. ವಿವಿಧ ಚರ್ಚ್‌ಗಳ ಧರ್ಮ ಗುರುಗಳು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಪ್ರತಿಭಟನೆ ಬಳಿಕ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

Read More
ರಾಜಕೀಯರಾಷ್ಟ್ರೀಯ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸಿಎಂ ಸಿದ್ದರಾಮಯ್ಯರವರು ಇಂದು ಆ.3ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ ಮಾಡಿರುವುದು ವಿಶೇಷವಾಗಿದೆ. ಇನ್ನು

Read More
ಕರಾವಳಿಕ್ರೈಂಜಿಲ್ಲೆ

ದ.ಕ ಜಿಲ್ಲೆಯಲ್ಲಿ ಮುಂದುವರಿದ ಅನೈತಿಕ ಪೊಲೀಸ್ ಗಿರಿ: ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ದಕ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಮುಂದುವರಿದಿದೆ. ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಆಟೋ ರಿಕ್ಷಾ ಚಾಲಕನಿಗೆ ಅಪರಿಚಿತರು ತೀವ್ರ ಹಲ್ಲೆ ನಡೆಸಿದ ಘಟನೆ

Read More
error: Content is protected !!