ಜಿಲ್ಲೆ

ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ; ಉಡುಪಿಯಲ್ಲಿ ಮಹಿಳೆಯರಿಗೆ ಶರಣ್ ಪಂಪ್ವೆಲ್ ಕರೆ

ಉಡುಪಿ: ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ಸಿದ್ಧರಾಗಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತೀಯ ಕಾರ್ಯದರ್ಶಿ

Read More
ಕರಾವಳಿ

ಕಳಂಜದ ಮಸೂದ್ ಕೊಲೆ ಪ್ರಕರಣ: ಓರ್ವ ಆರೋಪಿಗೆ ಷರತ್ತು ಬದ್ಧ ಜಾಮೀನು

ಸುಳ್ಯ: ಕಳಂಜದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ 8ನೇ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ. ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

Read More
ಕರಾವಳಿ

ಮಣಿಪುರ ಘಟನೆ ಖಂಡಿಸಿ ಸುಳ್ಯದಲ್ಲಿ ಕ್ರೈಸ್ತ ಬಂಧವರಿಂದ ಪ್ರತಿಭಟನೆ

ಸುಳ್ಯ: ಮಣಿಪುರದಲ್ಲಿ ಚರ್ಚ್‌ಗಳ ಮೇಲೆ, ಹಾಗೂ ಕ್ರೈಸ್ತ ಧರ್ಮೀಯರ ಮೇಲೆ ನಡೆಯುತ್ತಿರುವ ದಾಳಿ, ದೌರ್ಜನ್ಯ ಕೃತ್ಯಗಳನ್ನು ನಿಯಂತ್ರಿಸುವಲ್ಲಿ ಮಣಿಪುರ ಸರಕಾರ ಹಾಗು ಕೇಂದ್ರ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಮತ್ತು ಮಣಿಪುರ ಸರಕಾರವನ್ನು ಕೂಡಲೇ ವಜಾಗೊಳಿಸುವಂತಗೆ ಒತ್ತಾಯಿಸಿ ಕ್ರೈಸ್ತ ಸಮುದಾಯದ ವತಿಯಿಂದ ಆ.3ರಂದು ಸುಳ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಸುಳ್ಯದ ಮುಖ್ಯ ರಸ್ತೆಯಲ್ಲಿ ಸಾಗಿದ ಪ್ರತಿಭಟನಾ ಮೆರವಣಿಗೆ ಸುಳ್ಯ ತಾಲೂಕು ಕಚೇರಿ ಬಳಿ ಸಮಾವೇಶಗೊಂಡಿತು. ವಿವಿಧ ಚರ್ಚ್‌ಗಳ ಧರ್ಮ ಗುರುಗಳು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಪ್ರತಿಭಟನೆ ಬಳಿಕ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

Read More
ರಾಜಕೀಯರಾಷ್ಟ್ರೀಯ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸಿಎಂ ಸಿದ್ದರಾಮಯ್ಯರವರು ಇಂದು ಆ.3ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ ಮಾಡಿರುವುದು ವಿಶೇಷವಾಗಿದೆ. ಇನ್ನು

Read More
ಕರಾವಳಿಕ್ರೈಂಜಿಲ್ಲೆ

ದ.ಕ ಜಿಲ್ಲೆಯಲ್ಲಿ ಮುಂದುವರಿದ ಅನೈತಿಕ ಪೊಲೀಸ್ ಗಿರಿ: ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ದಕ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಮುಂದುವರಿದಿದೆ. ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಆಟೋ ರಿಕ್ಷಾ ಚಾಲಕನಿಗೆ ಅಪರಿಚಿತರು ತೀವ್ರ ಹಲ್ಲೆ ನಡೆಸಿದ ಘಟನೆ

Read More
ಕರಾವಳಿ

ಊರಿಗೆ ತೆರಳಲು ಹಣ ಇಲ್ಲ ಎಂದು ಕಚೇರಿಗೆ ಬಂದ ಅಂಧ ಯುವಕ: ಕೇಳಿದಷ್ಟು ಹಣ ಕೊಟ್ಟ ಶಾಸಕ ಅಶೋಕ್ ರೈ

ಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ. ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ. ನನಗೆ ಊರಿಗೆ

Read More
ಕರಾವಳಿ

ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ; ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸಂಸ್ಥೆಯ ಆವರಣದಲ್ಲಿ ನಡೆಯಿತು. ಶರೀಅತ್ ವಿಭಾಗದ ಪ್ರಾಂಶುಪಾಲರಾದ

Read More
ಕ್ರೈಂಜಿಲ್ಲೆ

ಮೊಬೈಲ್ ಚಾರ್ಜರ್ ಬಾಯಿಗೆ ಹಾಕಿದ ಮಗುವಿಗೆ ವಿದ್ಯುತ್ ಶಾಕ್- ಮಗು ಮೃತ್ಯು

ಮೊಬೈಲ್ ಚಾರ್ಜರ್ ವೈರ್ನಿಂದ ವಿದ್ಯುತ್ ಪ್ರವಹಿಸಿ ಮಗು ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಸಿದ್ದರ ಗ್ರಾಮದಲ್ಲಿ ವರದಿಯಾಗಿದೆ. ಸಂಜನಾ ದಂಪತಿಯ 8 ತಿಂಗಳ ಹೆಣ್ಣು ಮಗು ಇದಾಗಿದ್ದು,

Read More
ಕರಾವಳಿರಾಜಕೀಯ

ಕೊನೆಗೊಳ್ಳುತ್ತಾ ಸುಳ್ಯ ಕಾಂಗ್ರೆಸ್’ ನೊಳಗಿನ ಬಣ ರಾಜಕೀಯ

ಸುಳ್ಯ ವಿಧಾನಸಬಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಶಮನವಾಗುತ್ತಾ ಎನ್ನುವ ಪ್ರಶ್ನೆ ಇದೀಗ ಕಾರ್ಯಕರ್ತರೊಳಗೆ ದಟ್ಟವಾಗಿ ಕೇಳಿ ಬಂದಿದೆ. ಇದಕ್ಕೆ ಕಾರಣ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಮಮತಾ ಗಟ್ಟಿ ಅವರನ್ನು ಕೆಪಿಸಿಸಿ ನೇಮಕ ಮಾಡಿರುವುದು. ಸುಳ್ಯ ಕಾಂಗ್ರೆಸ್ ಈಗಾಗಲೇ ಒಡೆದ ಮನೆಯಂತಿರುವುದು ಸುಳ್ಳಲ್ಲ. ವಿಧಾನಸಭಾ ಚುನಾವಣೆಗೂ ಮುನ್ನವೇ ಆರಂಭಗೊಂಡ ಪಕ್ಷದೊಳಗಿನ ನಾಯಕರ ಆಂತರಿಕ ಕಚ್ಚಾಟ, ಶೀತಲ ಸಮರ, ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಮುಖ್ಯವಾಗಿ ನಂದಕುಮಾರ್ ಮತ್ತು ಜಿ.ಕೃಷ್ಣಪ್ಪ ಬಣಗಳ ಮಧ್ಯೆ ಪ್ರಾರಂಭಗೊಂಡ ಆಂತರಿಕ ಭಿನ್ನಮತ ಇಡೀ ಸುಳ್ಯ ಕಾಂಗ್ರೆಸ್‌ನಲ್ಲೇ ಕಚ್ಚಾಟಕ್ಕೆ ಕಾರಣವಾಗಿತ್ತು. ಪ್ರಮುಖವಾಗಿ ಈ ಇಬ್ಬರು ನಾಯಕರ ಸ್ವಪ್ರತಿಷ್ಠೆಗೋಸ್ಕರ ಪಕ್ಷ ಹಾಳಾಗುತ್ತಿದೆ ಎನ್ನುವ ಮಾತುಗಳು ಸುಳ್ಯ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ. ವ್ಯಕ್ತಿಗಿಂತ ಪಕ್ಷ ಮುಖ್ಯವಾಗಬೇಕೇ ಹೊರತು, ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾಗಬಾರದು. ಸುಳ್ಯದಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾದದ್ದೇ ಪಕ್ಷದ ಹೀನಾಯ ಸ್ಥಿತಿಗೆ ಕಾರಣ ಎನ್ನುವ ಮಾತುಗಳು ಕಾರ್ಯಕರ್ತರಿಂದಲೇ ಕೇಳಿ ಬರುತ್ತಿದೆ. ಸುಳ್ಯದ ಕೆಲವು ಕಾಂಗ್ರೆಸ್ ನಾಯಕರಿಗೆ ಪಕ್ಷ ಸಂಘಟಿಸುವುದಕ್ಕಿಂತಲೂ ಹೆಚ್ಚಾಗಿ ಪಕ್ಷದ ರಾಜ್ಯ ಮಟ್ಟದ ನಾಯಕರ ಹಿಂದೆ ಸುತ್ತಾಡಿ ತಮಗೊಂದು ಹುದ್ದೆ ಗಿಟ್ಟಿಸಿಕೊಳ್ಳುವುದೇ ಮುಖ್ಯ ಎಂಬಂತಾಗಿದೆ ಎನ್ನುವ ಆರೋಪ ಕೂಡಾ ಕೇಳಿ ಬರುತ್ತಿದ್ದು ಪಕ್ಷವನ್ನು ತಳಮಟ್ಟದಿಂದ ಕಟ್ಟಬೇಕೆನ್ನುವ ಪ್ರಾಮಾಣಿಕ ಪ್ರಯತ್ನಕ್ಕೆ ಯಾರೂ ಮುಂದಾಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಸುಳ್ಯ ಕಾಂಗ್ರೆಸ್ ನಾಯಕರ ನಡುವಿನ ಭಿನ್ನಮತ ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಮುಂದುವರಿದರೆ ಪಕ್ಷಕ್ಕೆ ಇನ್ನಷ್ಟು ಹಿನ್ನಡೆ ಆಗುವುದರಲ್ಲಿ ಅನುಮಾನವಿಲ್ಲ ಎಂದು ಸುಳ್ಯದ

Read More
ರಾಜಕೀಯರಾಜ್ಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರಗ ಜ್ಞಾನೇಂದ್ರ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಶಾಸಕ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ದ ವಾಗ್ದಾಳಿ ನಡೆಸಿದರು.  ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಸ್ತಾಪಿಸಿ ಮಾತನಾಡಿದ ಅವರು ‘ಸುಟ್ಟು ಕರಕಲಾಗಿರ್ತಾರೆ’ ನಮ್ಮ ಖರ್ಗೆಯವರನ್ನು ನೋಡಿದ್ರೆ ಗೊತ್ತಾಗುತ್ತೆ ಪಾಪ, ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆರಗ ಜ್ಞಾನೇಂದ್ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆರಗ ಜ್ಞಾನೇಂದ್ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

Read More
error: Content is protected !!