ಕರಾವಳಿ

ಪುತ್ತೂರು ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ NSUI ಬೆಂಬಲಿತ ಅಭ್ಯರ್ಥಿಯನ್ನು ಅಭಿನಂದಿಸಿದ ಶಕುಂತಾಳ ಶೆಟ್ಟಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಪುತ್ತೂರು ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿ ಆಶಿಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅವರನ್ನು ಮಾಜಿ ಶಾಸಕಿ ಶಕುಂತಾಳ ಶೆಟ್ಟಿ ಸಹಿತ

Read More
ಕರಾವಳಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ: NSUI ಬೆಂಬಲಿತ ಅಭ್ಯರ್ಥಿ ಜಯಭೇರಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇದರ ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿ ಆಶಿಕ್ ದರ್ಬೆ ಅವರಿಗೆ ಗೆಲುವು ಸಾಧಿಸಿದ್ದಾರೆ .

Read More
ಕರಾವಳಿರಾಜಕೀಯ

ಕೊನೆಗೂ ಮೌನ ಮುರಿದ ಶಕುಂತಳಾ ಶೆಟ್ಟಿ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ವಿವಾದಿತ ಪುರೋಹಿತರೋರ್ವರಿಂದ ಪೂಜೆ ಮಾಡಿಸಿದ ವಿಚಾರ ಗೊಂದಲಕ್ಕೆ ಕಾರಣವಾಗಿದಲ್ಲದೇ ಕಾರ್ಯಕರ್ತರ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸ್ಪಷ್ಟನೆ ನೀಡಬೇಕೆಂದು ಆಗ್ರಹ ವ್ಯಕ್ತವಾಗಿತ್ತು. ಆದರೆ ಶಕುಂತಳಾ ಶೆಟ್ಟಿಯವರು ಕಾಂಗ್ರೆಸ್ ಸಭೆಗೂ ಬರದೇ ಸ್ಪಷ್ಟನೆಯನ್ನೂ ನೀಡದೆ ಮೌನಕ್ಕೆ ಶರಣಾಗಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ ವಿಶ್ವನಾಥ್ ರೈ ಅವರು ಕ್ಷಮೆ ಕೇಳಿದ್ದರೂ ಕಾರ್ಯಕರ್ತರಲ್ಲಿ ಅಸಮಾಧಾನ ಹಾಗೆಯೇ ಮುಂದುವರಿದಿತ್ತು. ಇದೀಗ ಕೆಲವು ದಿನಗಳ ಬಳಿಕ ಶಕುಂತಳಾ ಶೆಟ್ಟಿಯವರು ವಿವಾದಿತ ಪುರೋಹತರೋರ್ವರಿಂದ ಪೂಜೆ ಮಾಡಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ಮೊದಲ ಬಾರಿ ಮೌನ ಮುರಿದಿದ್ದಾರೆ. ಅ.೨೧ರಂದು ಪುತ್ತೂರು ಬೈಪಾಸ್ ಅಶ್ಮಿ ಕಂಫರ್ಟ್ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಾವೇಶದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಕುಂತಳಾ ಶೆಟ್ಟಿಯವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗವಹಿಸಿದ್ದು ಹೌದು, ಪ್ರಸಾದ ಸ್ವೀಕರಿಸಿದ್ದೂ ಹೌದು, ಆದರೆ ಪೂಜೆ ಮಾಡಿದವರನ್ನು ಕರೆಸಿದ್ದು ನಾನಲ್ಲ ಎಂದು ತಿಳಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧೀನದಲ್ಲಿರುವ ಪೂಜಾ ಸಮಿತಿಯವರು ಅವರನ್ನು ಕರೆಸಿದ್ದು ಪೂಜೆಗೆ ಯಾರು ಬರುತ್ತಾರೆಂದು ನನಗೆ ಗೊತ್ತೂ ಇರಲಿಲ್ಲ. ಈ ಹಿಂದೆ ಬ್ಲಾಕ್ ಕಚೇರಿಯಲ್ಲಿ ನಡೆದ ಆಯುಧ ಪೂಜೆಗೂ ಶ್ರೀ ಕೃಷ್ಣ ಉಪಾಧ್ಯಾಯರು ಬಂದಿದ್ದರು. ಇತ್ತೀಚೆಗೆ ಅವರು ಕೋಮು ಪ್ರಚೋದನಕಾರಿ ಭಾಷಣ ಮಾಡಿದ ವಿಚಾರ ಆ ಬಳಿಕವೇ ತಿಳಿಯಿತು ಎಂದು ಅವರು ತಿಳಿಸಿದರು. ನಾನು ಸಾಮಾಜಿಕ ಜಾಲತಾಣ ಉಪಯೋಗಿಸುವುದು ಕಮ್ಮಿ, ಅದರಲ್ಲಿ ಬಂದಿರುವ ಆರೋಪಗಳ ಬಗ್ಗೆ ಹೆಚ್ಚು ನನಗೆ ಗೊತ್ತಿಲ್ಲ, ನನ್ನನ್ನು ಗೊತ್ತಿರುವವರಿಗೆ ಅದೆಲ್ಲಾ ಗೊತ್ತಿದೆ ಎಂದು ಶಕುಂತಳಾ ಶೆಟ್ಟಿ ತಿಳಿಸಿದರು. “ಪುರೋಹಿತ ವಿವಾದಿತ ವ್ಯಕ್ತಿಯೆಂದು ನನಗೆ ಗೊತ್ತಿರಲಿಲ್ಲ. ಗೊತ್ತಾದ ತಕ್ಷಣ ನಾನು ಪಕ್ಷದ ಪರವಾಗಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದೇನೆ. ಮುಂದೆ ಯಾವುದೇ ಕಾರ್ಯಕ್ರಮ ನಡೆಸುವಾಗಲೂ ಸಭೆ ಕರೆದು ಚರ್ಚಿಸಿಯೇ ಯಾವುದೇ ತೀರ್ಮಾನವನ್ನು ಕೈಗೊಳ್ಳುತ್ತೇವೆ” ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಸಭೆಗೆ ತಿಳಿಸಿದರು.

Read More
ಕರಾವಳಿ

ಬಿಜೆಪಿ ಹಿರಿಯ ಕಾರ್ಯಕರ್ತರ ಜೊತೆ ಬೆಳಕಿನ ಹಬ್ಬ ಆಚರಣೆ

ಪುತ್ತೂರು: ಬಿಜೆಪಿ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿದಂತಹ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಜೊತೆಗೂಡಿಸಿ ಬೆಳಕಿನ ಹಬ್ಬದ ಸಂಭ್ರಮಾಚರಣೆ ಹಾಗೂ ಎಲ್ಲರಿಗೂ ಗೌರವಾರ್ಪಣೆ ಮಾಡುವ ಕಾರ್ಯಕ್ರಮ ಅ.23ರಂದು ಪುತ್ತೂರಿನ

Read More
Uncategorizedರಾಜ್ಯ

ಭಯೋತ್ಪಾದನೆಯ ದಮನಕ್ಕೆ ಸಜ್ಜು: ಪೊಲೀಸ್‌ ಸಂಸ್ಮರಣಾ ದಿನಾಚರಣೆಯಲ್ಲಿ ಬೊಮ್ಮಾಯಿ

ಬೆಂಗಳೂರು: ಭಯೋತ್ಪಾದನೆಯ ದಮನಕ್ಕೆ ಪೊಲೀಸರಿಗೆ ಆಧುನಿಕ ಶಸ್ತ್ರಾಸ್ತ್ರಗಳ ಅಗತ್ಯವಿದ್ದು, ಅದಕ್ಕಾಗಿ ತರಬೇತಿ ಪಡೆದ ಪ್ರತ್ಯೇಕ ಕಮಾಂಡ್‌ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಶುಕ್ರವಾರ

Read More
ಕರಾವಳಿ

ಪುತ್ತೂರು: ಹೆದ್ದಾರಿಗೆ ಬಿದ್ದ ಬೃಹತ್ ಗಾತ್ರದ ಮರವನ್ನು ತೆರವುಗೊಳಿಸಿ ಪ್ರಶಂಸೆಗೆ ಪಾತ್ರವಾದ SKSSF ವಿಖಾಯ ತಂಡ

ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಮುಕ್ರಂಪಾಡಿ ಸಮೀಪ ಮರ ಬಿದ್ದು ವಾಹನ ಸವಾರರಿಗೆ ಅಡಚಣೆ ಉಂಟಾಯಿತು. ಇದನ್ನು ಮನಗಂಡು ಎಸ್ ಕೆ ಎಸ್ ಎಸ್ ಎಫ್ ಪುತ್ತೂರು ವಲಯ

Read More
ಕರಾವಳಿ

ಇಸ್ಲಾಂ ಧರ್ಮದ ವಿರುದ್ಧ ಅವಹೇಳನ
ಪುರೋಹಿತ ಶ್ರೀಕೃಷ್ಣ ಉಪದ್ಯಾಯ ವಿರುದ್ದ ದೂರು

ಪುತ್ತೂರು: ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡು, ಆರೋಪಿಯಾಗಿರುವ ಕೃಷ್ಣ ಉಪಾಧ್ಯಾಯರನ್ನು ಕೂಡಲೇ ಬಂಧಿಸಿ ಕ್ರಮ ಜರಗಿಸಬೇಕೆಂದು, ಆಗ್ರಹಿಸಿ ಪುತ್ತೂರು

Read More
ಕರಾವಳಿಜಿಲ್ಲೆ

ದಕ್ಷಿಣ‌ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವರ್ಗಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ಶುಕ್ರವಾರ ವರ್ಗಾವಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ

Read More
ಕರಾವಳಿ

ಕಾಣಿಯೂರಿನಲ್ಲಿ ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕವಾಗಿ ಗುಂಪು ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಲು : ಎಸ್ ಡಿಪಿಐ ಆಗ್ರಹ

ಸುಳ್ಯ : ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ಕಾರಿನಲ್ಲಿ ಜವಳಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಯುವಕರ ಮೇಲೆ ಸಂಘಪರಿವಾರದ ಗುಂಪು, ವ್ಯಾಪಾರಕ್ಕೆ ತಡೆಯೊಡ್ಡಿ ಎರಡು

Read More
ಕರಾವಳಿ

ಕಾಣಿಯೂರು ವ್ಯಾಪಾರಿಗಳ ಮೇಲಿನ ಹಲ್ಲೆ ಪ್ರಕರಣ
ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ: ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ಕಾಣಿಯೂರಿನಲ್ಲಿ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಮತ್ತು ಪ್ರಕರಣವನ್ನು

Read More
error: Content is protected !!