ಚಂದ್ರಯಾನ-3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ಸ್ಥಳಕ್ಕೆ ಶಿವಶಕ್ತಿ ಪಾಯಿಂಟ್ ಎಂದು ನಾಮಕರಣ ಮಾಡಿದ ಪ್ರಧಾನಿ ಮೋದಿ
ಬೆಂಗಳೂರು: ಚಂದ್ರಯಾನ-3ರ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ಸ್ಥಳವನ್ನು ʼಶಿವಶಕ್ತಿʼ ಪಾಯಿಂಟ್ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದಾರೆ.

ಅವರು ನಗರದ ಪೀಣ್ಯದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಕಮಾಂಡಿಂಗ್ ಸೆಂಟರ್‌ಗೆ ಆ . 26ರಂದು ಬೆಳಗ್ಗೆ ಭೇಟಿನೀಡಿ ಚಂದ್ರಯಾನ-3ರ ಯಶಸ್ಸಿಗಾಗಿ ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು.
“ನಮ್ಮ ಚಂದ್ರಯಾನ-3ರ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್ ಎಂದು ನಾಮಕರಣ ಮಾಡಲು ಬಯಸುತ್ತೇನೆ’ ಎಂದು ಮೋದಿ ಹೇಳಿದರು.