ರಾಜ್ಯ ಬಿಜೆಪಿ ನಾಯಕರನ್ನು ಮೋದಿ ಬೀದಿಪಾಲು ಮಾಡಿದ್ದಾರೆ- ಕಾಂಗ್ರೆಸ್
ಚಂದ್ರಯಾನ-3 ಯೋಜನೆ ಯಶಸ್ವಿಗೊಳಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದರು.
ರೋಡ್ ಶೋ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಆರ್.ಅಶೋಕ್, ಮುನಿರತ್ನ, ಕೆ.ಗೋಪಾಲಯ್ಯ ಸೇರಿ ಹಲವು ಬಿಜೆಪಿ ನಾಯಕರು ಬ್ಯಾರಿಕೇಡ್ ಹೊರಗಡೆ ನಿಂತು ಪ್ರಧಾನಿ ಮೋದಿ ಅವರಿಗೆ ಕೈ ಬೀಸಿದ್ದರು. ಇದಕ್ಕೆ ವ್ಯಂಗ್ಯವಾಡಿರುವ ರಾಜ್ಯ ಕಾಂಗ್ರೆಸ್, ‘ರಾಜ್ಯ ಬಿಜೆಪಿ ನಾಯಕರನ್ನು ಮೋದಿ ಬೀದಿ ಪಾಲು ಮಾಡಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡಿದೆ.
“ಬಿಜೆಪಿ ನಾಯಕರದ್ದು ಎಂತಹ ದುಸ್ಥಿತಿ. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ” ಎಂದು ಕಾಂಗ್ರೆಸ್ ಕಾಲೆಳೆದಿದೆ.