ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ತೀರ್ಮಾನ ಮಾಡಿಲ್ಲ- ಕೆ.ಹೆಚ್. ಮುನಿಯಪ್ಪ
ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವ ತೀರ್ಮಾನವನ್ನು ನಾವು ತೆಗೆದುಕೊಂಡಿಲ್ಲ ಎಂದು ಆಹಾರ ನಾಗಾರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವ ವಿಚಾರವಾಗಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ವೈಟ್ ಬೋರ್ಡ್ ನಾಲ್ಕು ಚಕ್ರ ವಾಹನ ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡುವ ನಿಯಮ ಬಿಜೆಪಿ ಸರ್ಕಾರದ ಅವಧಿಯದ್ದಾಗಿದ್ದು, ಸದ್ಯಕ್ಕೆ ಈ ವಿಚಾರದಲ್ಲಿ ಯಾವುದೆ ತೀರ್ಮಾನವಿಲ್ಲ. 1.28 ಕೋಟಿ ಜನರು ಪಡಿತರ ಚೀಟಿ ಹೊಂದಿದ್ದಾರೆ. ಪರಿಶೀಲನೆ ಮಾಡಿ ಎಲ್ಲರಿಗೂ ಅಕ್ಕಿ ವಿತರಣೆ ಮಾಡುವ ಕುರಿತು ಕ್ರಮವಹಿಸುತ್ತೇವೆ. ಅರ್ಹರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಭರವಸೆ ನೀಡಿದರು.
ಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.