ಧರ್ಮಸ್ಥಳ: ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಲಕ್ಷಾಂತರ ರೂ ಮೌಲ್ಯದ ಚಿನ್ನ, ನಗದು ಕಳ್ಳತನ
ಬೆಳ್ತಂಗಡಿ: ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಧರ್ಮಸ್ಥಳದಲ್ಲಿ ವರದಿಯಾಗಿದೆ. ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಗದಗ ಮೂಲದ ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಕಳ್ಳರು ಕಳ್ಳತನ ನಡೆಸಿದ್ದಾರೆ.
ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ ಎಂಬವರು ಆ.26 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತಮ್ಮ ಕಾರಿನಲ್ಲಿ ಬಂದಿದ್ದರು. ಕಾರನ್ನು ಲಾಕ್ ಮಾಡಿ ದೇವಸ್ಥಾನದ ಹತ್ತಿರ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ.ಕಳ್ಳರು ಅವರು ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಕಾರಿನ ಗಾಜನ್ನು ಒಡೆದು ಕಾರಿನ ಒಳಗಿದ್ದ ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದ ರೂ.1.96 ಲಕ್ಷ ಮೌಲ್ಯದ 40 ಗ್ರಾಂ ತೂಕದ ಕರಿಮಣಿ ಸರ ಮತ್ತು ಸುಮಾರು ರೂ. 4 ಸಾವಿರ ಮೌಲ್ಯದ 1 ಮೊಬೈಲ್‌ನ್ನು ಕಳವುಗೈದಿದ್ದಾರೆ ಎಂದು ತಿಳಿದು ಬಂದಿದೆ.